ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಈ ಆಯ್ಕೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿಂತಿವೆ.
ಹುದ್ದೆಯ ಹೆಸರು: ಅಕೌಂಟ್ ಎಕ್ಸ್ಪರ್ಟ್ ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಎಂಬಿಎ (ಫೈನಾನ್ಸ್) ಅಥವಾ ಎಂ.ಕಾಮ್ ಪದವಿ ಪಡೆದಿರಬೇಕು.
ಅನುಭವಕ್ಕೆ ಆದ್ಯತೆ: ಈ ಹುದ್ದೆಗೆ ಕನಿಷ್ಠ 3 ವರ್ಷಗಳ ಅನುಭವ ಹಾಗೂ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಗುತ್ತಿಗೆ ಅವಧಿ: ಆಯ್ಕೆ ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರ ಮೇಲೆ ನೇಮಿಸಿಕೊಳ್ಳಲಾಗುತ್ತದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ಮೀರಿರಬಾರದು.
ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35 ಸಾವಿರದಿಂದ 45 ಸಾವಿರದವರೆಗೆ ವೇತನ ನೀಡಲಾಗುತ್ತದೆ.
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಪ್ಲಿಕೇಶನ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.