ಶಿಕ್ಷಣ ಸುದ್ದಿ

ಶಿಕ್ಷಕರಿಗೆ ಸ್ಥಳ ಆಯ್ಕೆ ಕೌನ್ಸೆಲಿಂಗ್ ಇಂದು

 

ತುಮಕೂರು: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ ಸಹಶಿಕ್ಷಕರು ಗ್ರೇಡ್-2 ವೃಂದಕ್ಕೆ ಬಡ್ತಿ ನೀಡುವ ಸಂಬಂಧ ಸ್ಥಳ ಆಯ್ಕೆ ಕೌನ್ಸೆಲಿಂಗ್ ಸೋಮವಾರ (ಸೆ.14) ಮಧ್ಯಾಹ್ನ 2 ಗಂಟೆಗೆ ತುಮಕೂರು ಡಿಡಿಪಿಐ ಕಚೇರಿಯಲ್ಲಿ ನಡೆಯಲಿದೆ.

ಕೌನ್ಸೆಲಿಂಗ್‌ಗೆ ಹಾಜರಾಗುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪಟ್ಟಿಯನ್ನು ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಕಳುಹಿಸಲಾಗಿದೆ. ಈ ಪಟ್ಟಿಯಲ್ಲಿರುವ ಶಿಕ್ಷಕರು ಕಡ್ಡಾಯವಾಗಿ ಕೌನ್ಸೆಲಿಂಗ್‌ಗೆ ಹಾಜರಾಗುವುದು ಕಡ್ಡಾಯ. ಗೈರು ಹಾಜರಾದಲ್ಲಿ ಪ್ರಾಕ್ಸಿ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಲಾಗುವುದು ಎಂದು ಡಿಡಿಪಿಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.