1-8ನೇ ತರಗತಿ ವಿದ್ಯಾರ್ಥಿಗಳಿಗೆ ಲೋಕಲ್‌ ಚಾನೆಲ್‌ ಮೂಲಕ ಕ್ಲಾಸ್‌

September 17, 2020
Thursday, September 17, 2020

 


ಬೆಂಗಳೂರು (ಸೆ.17): ಒಂದರಿಂದ ಎಂಟನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್‌ ಕೇಬಲ್‌ ಟಿವಿ ಚಾನೆಲ್‌ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಚರ್ಚಿಸಬೇಕಾದ ವಿಷಯಗಳ ಕುರಿತು ಬುಧವಾರ ಸಮಗ್ರ ಶಿಕ್ಷಣ ಕರ್ನಾಟಕ ಸಭಾಂಗಣದಲ್ಲಿ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಸದಸ್ಯರೊಂದಿಗೆ ವಿವಿಧ ವೆಬಿನಾರ್‌ಗಳ ಮೂಲಕ ಸಚಿವರು ಚರ್ಚೆ ನಡೆಸಿದರು.

ಗುಡ್ ನ್ಯೂಸ್ : ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ...

ನಂತರ ಮಾತನಾಡಿದ ಅವರು, ಈಗಾಗಲೇ ಸಂವೇದಾ ಕಾರ್ಯಕ್ರಮದ ಮೂಲಕ ದೂರದರ್ಶನದ ಚಂದನವಾಹಿನಿಯಲ್ಲಿ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ.

ಇನ್ನು 1ರಿಂದ 8ನೇ ತರಗತಿಯ ಮಕ್ಕಳಿಗೆ ಸ್ಥಳೀಯ ಕೇಬಲ್‌ ಚಾನೆಲ್‌ಗಳ ಮೂಲಕ ತರಗತಿ ನಡೆಸಲು ಕ್ರಮ ವಹಿಸಲಾಗುತ್ತಿದ್ದು, ಶೀಘ್ರ ಪ್ರಾರಂಭವಾಗಲಿದೆ. ಸಂವೇದಾ ತರಗತಿಗಳು ವಿದ್ಯಾಗಮದೊಂದಿಗೆ ಸಂಯೋಜನೆಗೊಂಡಿದ್ದು, ನಮ್ಮ ಇಲಾಖೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಸಹಾ ಲಭ್ಯವಿದೆ ಎಂದು ವಿವರಿಸಿದರು.

ಶುಲ್ಕ ಸಂಗ್ರಹದ ಬಗ್ಗೆ ಸ್ಪಷ್ಟನೆ:

ಕೋವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ಪೋಷಕರಿಂದ ಶುಲ್ಕ ಸಂಗ್ರಹಕ್ಕೆ ಒತ್ತಾಯ ಮಾಡಬಾರದೆಂದು ನಾವು ಆದೇಶಿಸಿದ್ದೆವು. ಆದರೆ, ಬಜೆಟ್‌ ಶಾಲೆಗಳು ತೊಂದರೆಗೀಡಾಗಿದ್ದನ್ನು ಗಮನದಲ್ಲಿಟ್ಟುಕೊಂಡು ಹಾಗೂ ಖಾಸಗಿ ಶಾಲೆಗಳ ಶಿಕ್ಷಕರ ವೇತನಕ್ಕೆ ಸಮಸ್ಯೆಯಾಗಿರುವ ಅಂಶ ಪರಿಗಣಿಸಿ ಕಳೆದ 15 ದಿನಗಳ ಹಿಂದೆ ಶುಲ್ಕ ವಸೂಲಾತಿಗೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಲಾ ನೋಂದಣಿ ವಿನಾಯಿತಿಗೆ ಸಭೆ

ಬೆಂಗಳೂರು: ಖಾಸಗಿ ಶಾಲೆಗಳ ನೋಂದಣಿ ನವೀಕರಣಕ್ಕೆ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸಲು ಅಗ್ನಿ ಶಾಮಕ ದಳವೂ ಸೇರಿ ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳ ಸಭೆ ಸದ್ಯದಲ್ಲೇ ನಡೆಸಿ ಅಗತ್ಯ ವಿನಾಯಿತಿ ನೀಡಲು ಸೂಚಿಸಲಾಗುವುದು ಎಂದು ಇದೇ ವೇಳೆ ಸಚಿವ ಎಸ್‌.ಸುರೇಶ್‌ ಕುಮಾರ್‌ ಭರವಸೆ ನೀಡಿದ್ದಾರೆ.

ಪರೀಕ್ಷೆಗೆ 700 ಕಿ. ಮೀ. ಪ್ರಯಾಣಿಸಿ ಬಂದ್ರೂ 10 ನಿಮಿಷ ಲೇಟ್, ವಿದ್ಯಾರ್ಥಿಯ ಒಂದು ವರ್ಷ ವೇಸ್ಟ್..

ಕೊರೋನಾ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಸಮಸ್ಯೆಗಳ ಕುರಿತು ತಮಗೆ ಸಂಪೂರ್ಣ ಅರಿವಿದೆ. ಈ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದ ಅನುಮತಿ ನೀಡುವಾಗ ನಿಯಮಾವಳಿಗಳನ್ನು ಸರಳೀಕರಣಗೊಳಿಸುವ ಅನಿವಾರ್ಯತೆ ಇದೆ ಎಂದರು.

ವಿಧಾನಪರಿಷತ್‌ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಡಾ.ವೈ.ಎ. ನಾರಾಯಣ ಸ್ವಾಮಿ, ಅ.ದೇವೇಗೌಡ, ಹಣಮಂತ ಎಚ್‌. ನಿರಾಣಿ, ಎಸ್‌.ಎಲ್‌. ಭೋಜೇಗೌಡ ಮತ್ತಿತರರು ಭಾಗವಹಿಸಿದರು.

Thanks for reading 1-8ನೇ ತರಗತಿ ವಿದ್ಯಾರ್ಥಿಗಳಿಗೆ ಲೋಕಲ್‌ ಚಾನೆಲ್‌ ಮೂಲಕ ಕ್ಲಾಸ್‌ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on 1-8ನೇ ತರಗತಿ ವಿದ್ಯಾರ್ಥಿಗಳಿಗೆ ಲೋಕಲ್‌ ಚಾನೆಲ್‌ ಮೂಲಕ ಕ್ಲಾಸ್‌

Post a Comment