ಸುರಕ್ಷಿತ ನೀಟ್‌ ಪರೀಕ್ಷೆಗೆ ಮಾರ್ಗಸೂಚಿ: ಇದೇ 13ರಂದು ದೇಶಾದ್ಯಂತ ಪರೀಕ್ಷೆ

September 10, 2020


 

ನವದೆಹಲಿ: ನೀಟ್‌ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್‌ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್‌ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್‌ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್‌ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.

Related Articles

Advertisement
Previous
Next Post »