ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಉದ್ಯೋಗಾವಕಾಶ: ವೇತನ 45 ಸಾವಿರ ರೂ.

September 03, 2020
Thursday, September 3, 2020

 



ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಈ ಆಯ್ಕೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿಂತಿವೆ.


ಹುದ್ದೆಯ ಹೆಸರು: ಅಕೌಂಟ್ ಎಕ್ಸ್​ಪರ್ಟ್​ ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಎಂಬಿಎ (ಫೈನಾನ್ಸ್​) ಅಥವಾ ಎಂ.ಕಾಮ್ ಪದವಿ ಪಡೆದಿರಬೇಕು.

ಅನುಭವಕ್ಕೆ ಆದ್ಯತೆ: ಈ ಹುದ್ದೆಗೆ ಕನಿಷ್ಠ 3 ವರ್ಷಗಳ ಅನುಭವ ಹಾಗೂ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಗುತ್ತಿಗೆ ಅವಧಿ: ಆಯ್ಕೆ ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರ ಮೇಲೆ ನೇಮಿಸಿಕೊಳ್ಳಲಾಗುತ್ತದೆ.

ಬಳಿಕ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಗುತ್ತಿಗೆ ಅವಧಿಯನ್ನು ವಿಸ್ತರಿಸಲಾಗುವುದು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ಮೀರಿರಬಾರದು.

ವೇತನ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35 ಸಾವಿರದಿಂದ 45 ಸಾವಿರದವರೆಗೆ ವೇತನ ನೀಡಲಾಗುತ್ತದೆ.
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಅಪ್ಲಿಕೇಶನ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.


Thanks for reading ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಉದ್ಯೋಗಾವಕಾಶ: ವೇತನ 45 ಸಾವಿರ ರೂ. | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಉದ್ಯೋಗಾವಕಾಶ: ವೇತನ 45 ಸಾವಿರ ರೂ.

Post a Comment