ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ

September 14, 2020

 


ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕ ಸೇವಾ ಆಯೋಗ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ. 19,2020

ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ ಸೆ. 21,2020

ಅರ್ಜಿ ಶುಲ್ಕ

ಅರ್ಜಿದಾರರು 600 ರೂ. ಪಾವತಿಸಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300 ರೂ.

ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಸೆ. 18 ರೊಳಗೆ ಪಾವತಿಸಬೇಕು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡಬಹುದು.

Related Articles

Advertisement
Previous
Next Post »

1 komentar:

Write komentar