`SSLC' ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

September 21, 2020
Monday, September 21, 2020



 ಬೆಂಗಳೂರು : ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೆ ಅವ್ಯವಹಾರ ನಡೆಯದಂತೆ ಮತ್ತು ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಭಂಧಿತ ಪ್ರದೇಶ ಎಂದು ಘೋಷಿಸಲಾಗಿದೆ.

ಪೂರಕ ಪರೀಕ್ಷೆಯೂ ಬೆಳಗ್ಗೆ 10.15 ರಿಂದ ಆರಂಭಗೊಳ್ಳಲಿದ್ದು, 1.15 ರವರೆಗೆ ನಡೆಯಲಿದೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಗೆ ಮುಖ್ಯ ಪರೀಕ್ಷೆಗೆ ಕೈಗೊಂಡಿರುವ ರೀತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ರಾಜ್ಯಾದ್ಯಂತ 772 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಜೂನ್/ಜುಲೈನಲ್ಲಿ ನಡೆದ ಎಸ್‌ಎಸ್‌ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಅನಾರೋಗ್ಯದಿಂದ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳು ಈಗ ಪರೀಕ್ಷೆ ಬರೆಯುತ್ತಿದ್ದಾರೆ. 2.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

ಮುಖ್ಯ ಪರೀಕ್ಷೆಯಲ್ಲಿ ಕೊರೊನಾ ಸೇರಿ ಇನ್ನಿತರ ಅನಾರೋಗ್ಯ ಕಾರಣಗಳಿಂದಾಗಿ ಪರೀಕ್ಷೆಗೆ ಗೈರು ಹಾಜರಾಗಿದ್ದ 15,075 ವಿದ್ಯಾರ್ಥಿಗಳಿಗೆ ಪ್ರಥಮ ಅವಕಾಶ ವೆಂದು ಪರೀಕ್ಷೆ ಎಂದು ಪರಿಗಣಿಸಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ.

ಎಸ್‌ ಎಸ್‌ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ

ಸೆ.21 ಗಣಿತ, ಸಮಾಜಶಾಸ್ತ್ರ

ಸೆ.22 ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)

ಸೆ.23 ಸಮಾಜಶಾಸ್ತ್ರ

ಸೆ.24 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಸೆ. 25 ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)

ಸೆ. 26 ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ

ಸೆ. 28 ಬೆಳಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ

ಸೆ. 29 ಜಿಟಿಎಸ್ ಪ್ರಾಯೋಗಿಕ ಪರೀಕ್ಷೆ

Thanks for reading `SSLC' ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on `SSLC' ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

Post a Comment