News

ಕನ್ನಡ ಮಾಧ್ಯಮ ಮಕ್ಕಳಿಗೆ ಉಚಿತ ಲ್ಯಾಪ್‌ ಟಾಪ್‌

 ಬೆಂಗಳೂರು (ನ.10): 
ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ಆನ್‌ಲೈನ್‌ ಮತ್ತು ಆಫ್‌ಲೈನ್‌ ಶಿಕ್ಷಣ ಪಡೆಯಲು ಪೂರಕವಾಗಿ ಟ್ಯಾಬ್‌ ಮತ್ತು ಲ್ಯಾಪ್‌ ಟಾಪ್‌ ವಿತರಿಸುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ‘ಜ್ಞಾನತಾಣ’ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಚಾಲನೆ ನೀಡಿದರು.

ಈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ 21 ಕೋಟಿ ರೂ ವೆಚ್ಚದಲ್ಲಿ ಮೊದಲ ವರ್ಷ 20 ಸಾವಿರ ಟ್ಯಾಬ್‌ ಮತ್ತು 10 ಸಾವಿರ ಲಾಪ್‌ಟಾಪ್‌ಗಳನ್ನು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ವಿತರಿಸಲಾಗುತ್ತದೆ. ಐದರಿಂದ ಹತ್ತನೇ ತರಗತಿಯ ಮಕ್ಕಳ ಇಂಗ್ಲೀಷ್‌, ಗಣಿತ, ವಿಜ್ಞಾನ ಇತ್ಯಾದಿ ಪಠ್ಯಗಳು ಪ್ರಿಲೋಡೆಡ್‌ ಆಗಿದ್ದು ಇಂಟರ್ನೆಟ್‌ ಬಳಸದೆ ಪಠ್ಯಗಳ ಅಧ್ಯಯನವನ್ನು ನಡೆಸಬಹುದು.

Leave a Reply

Your email address will not be published.