News

ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: BMTC ಬಸ್​ಗಳಲ್ಲಿ ಉಚಿತ ಪ್ರಯಾಣದ ಅವಕಾಶ

 


ಬೆಂಗಳೂರು: ರಾಜ್ಯದಲ್ಲಿ ಕಾಲೇಜು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ BMTCಸಂಸ್ಥೆ ಸಿಹಿ ಸುದ್ದಿ ನೀಡಿದೆ. ಹೌದು, BMTCಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ.


ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ತಾಂತ್ರಿಕ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿಯಿಂದ ಅವಕಾಶ ಕಲ್ಪಿಸಲಾಗಿದೆ.

ಕಳೆದ ವರ್ಷದ ಪಾಸ್​ ಅಥವಾ ಸ್ಮಾರ್ಟ್ ಕಾರ್ಡ್ ತೋರಿಸಿ ವಿದ್ಯಾರ್ಥಿಗಳು ತಮ್ಮ ಕಾಲೇಜಿಗೆ ಪ್ರಯಾಣ ಬೆಳೆಸುವ ಅವಕಾಶ ನೀಡಲಾಗಿದೆ.

ಮುಂದಿನ ನೂತನ ಪಾಸ್ ವಿತರಿಸುವವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಸಂಸ್ಥೆ ತಿಳಿಸಿದೆ. ಆದರೆ, ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಕಾಲೇಜಿನವರೆಗೆ ಮಾತ್ರ ಬಸ್​ಗಳಲ್ಲಿ ಪ್ರಯಾಣ ಬೆಳೆಸಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.

Leave a Reply

Your email address will not be published.