News

ಕೊರೊನಾ ಸೋಂಕಿನಿಂದ ಬಾಧಿತರಾದ ನೌಕರರು ಹಾಗೂ ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ಬೆಂಗಳೂರು : ಕೊರೊನಾ ಸೋಂಕಿನಿಂದ ಬಾಧಿತರಾದ ನೌಕರರು ಹಾಗೂ ಕಾರ್ಮಿಕರಿಗೆ ಕ್ವಾರಂಟೈನ್ ರಜೆ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಂದುವರೆದಂತೆ, ಕರ್ನಾಟಕ ಸರ್ಕಾರದ ಪರವಾಗಿ ಎಲ್ಲಾ ಸಾರ್ವಜನಿಕ ಖಾಸಗಿ ಸಂಸ್ಥೆಗಳ ಉದ್ಯೋಗಿಗಳನ್ನು ಈ ಕೆಳಕಂಡಂತೆ ನೋಡಿಕೊಳ್ಳಲು ಮನವಿ ಮಾಡಲಾಗಿದೆ.

1) ಕೊರೊನಾ ಸೋಂಕು ತಗುಲಿರುವ ನೌಕರರು ಕಾರ್ಮಿಕರು ಕ್ವಾರಂಟೈನ್ ನಲ್ಲಿ ಇರುವ ಅವಧಿಯನ್ನು ಗೈರು ಹಾಜರಿ ಎಂದು ಪರಿಗಣಿಸದಿರುವುದು.

2) ಕೊರೊನಾ ಸೋಂಕಿನಿಂದ ಬಳಲುತ್ತಿರುವ ನೌಕರರು ಹಾಗೂ ಕಾರ್ಮಿಕರಿಗೆ ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಮನವಿ ಮಾಡಲಾಗಿದೆ.

3) ಕೊರೊನಾ ಸೋಂಕಿತ ನೌಕರರ ಖಾತೆಯಲ್ಲಿ ರಜೆ ಇಲ್ಲದಿದ್ದಲ್ಲಿ

ಇತರ ಕಾರ್ಮಿಕರ ರಜೆಯನ್ನು ವರ್ಗಾಯಿಸಿಕೊಳ್ಳಲು ಅನುಕೂಲ ಮಾಡಿಕೊಡುವಂತೆ ಆದೇಶಿಸಲಾಗಿದೆ.
.

Leave a Reply

Your email address will not be published.