ಕುತೂಹಲ ಮೂಡಿಸಿದ ಬಿಎಸ್‌ವೈ-ಎಚ್‌ಡಿಕೆ ಭೇಟಿ

November 14, 2020
Saturday, November 14, 2020

 


ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಉಪಚುನಾವಣೆ ಬಳಿಕ ಇಬ್ಬರು ನಾಯಕರ ಮುಖಾಮುಖಿಯಾಗಿದ್ದು, ಜತೆಗೆ ಮೇಲುಕೋಟೆ ಶಾಸಕ ಸಿ.ಎಸ್‌.ಪುಟ್ಟರಾಜು ಜತೆಗಿದ್ದರು. ಇಬ್ಬರೂ ನಾಯಕರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಈ ಹಿಂದೆಯೂ ಕುಮಾರಸ್ವಾಮಿ, ತಮ್ಮ ಪಕ್ಷದ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅನುದಾನ ಬಿಡುಗಡೆ ಮನವಿ ಮಾಡಿದ್ದರು. ಅದಕ್ಕೆ ಯಡಿಯೂರಪ್ಪ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿದ್ದರು.

ಜೆಡಿಎಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಅನುದಾನಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು.

ಅದನ್ನು ಬಿಟ್ಟರೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಕುಮಾರಸ್ವಾಮಿ ಆಪ್ತ ಮೂಲಗಳು ತಿಳಿಸಿವೆ.

Thanks for reading ಕುತೂಹಲ ಮೂಡಿಸಿದ ಬಿಎಸ್‌ವೈ-ಎಚ್‌ಡಿಕೆ ಭೇಟಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಕುತೂಹಲ ಮೂಡಿಸಿದ ಬಿಎಸ್‌ವೈ-ಎಚ್‌ಡಿಕೆ ಭೇಟಿ

Post a Comment