ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ..!

November 13, 2020

 


ಬೆಂಗಳೂರು : ಕೊರೊನಾ ಹಾವಳಿಯಿಂದಾದ ಲಾಕ್ ಡೌನ್ ನಿಂದಾಗಿ ರಾಜ್ಯದ ಕಾಲೇಜುಗಳು ಅನೇಕ ತಿಂಗಳುಗಳು ಮುಚ್ಚಿದ್ದವು. ಆದ್ರೆ ಇದರಿಂದಾಗಿ ಕಾಲೇಜು ಶಿಕ್ಷಣ ಇಲಾಖೆಯಡಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು, ಗೌರವಧನ ಇಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. 5 ತಿಂಗಳ ಅವಧಿಗೆ ಗೌರವಧನವನ್ನ ಪಾವತಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಆರ್ಥಿಕ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ಮೂರ್ತಿಯವರು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು ತಿಳಿಸಿದ್ದು, ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕಾಲೇಜು ಶಿಕ್ಷಣ ಇಲಾಖೆಯಡಿಯಲ್ಲಿನ ಅತಿಥಿ ಉಪನ್ಯಾಸಕರುಗಳಿಗೆ ಲಾಕ್ ಡೌನ್ ಅವಧಿಯಲ್ಲಿ ಆನ್ ಡ್ಯೂಟಿ ಎಂದು 5 ತಿಂಗಳ ಅವಧಿಗೆ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಪಾವತಿಸಲು ಸಹಮತಿಸಿದೆ.

ಹೀಗಾಗಿ ಒಟ್ಟು 14,447 ಅತಿಥಿ ಉಪನ್ಯಾಸಕರಿಗೆ ಇದೀಗ ಗೌರವಧನ ಪಾವತಿಸಲು ಸರ್ಕಾರ ಆದೇಶಿಸಿದೆ. ಒಟ್ಟು ರೂ.55.70 ಕೋಟಿಗಳನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಒಪ್ಪಿದೆ.

Related Articles

Advertisement
Previous
Next Post »