ಸರ್ಕಾರಿ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸುತ್ತೇನೆ: ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ

November 08, 2020
ಹಾಸನ
 : ನಗರದ ಗುರು ಭವನದಲ್ಲಿಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದದ ವತಿಯಿಂದ ಆಯೋಜಿಸಿದ್ದ ಸರ್ಕಾರಿ ನೌಕರರು ಹಾಗೂ ವೃಂದ ಸಂಘಗಳ ಪದಾಧಿಕಾರಿಗಳೊಂದಿಗೆ ಸಂವಾದ ಮತ್ತು ಚರ್ಚೆ ಕಾರ್ಯಕ್ರಮವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಅವರು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರಿ ನೌಕರರಿಗಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಪಾಟೀಲ್, ಖಜಾಂಚಿ ಶ್ರೀನಿವಾಸ್, ರಾಜ್ಯ ಗೌರವಾಧ್ಯಕ್ಷರಾದ ಶಿವರುದ್ರಯ್ಯ, ವಿಭಾಗೀಯ ಉಪಾಧ್ಯಕ್ಷರಾದ ಮೋಹನ್ ಕುಮಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಈ. ಕೃಷ್ಣೇಗೌಡ, ತಾಲ್ಲೂಕು ಅಧ್ಯಕ್ಷರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಶಿಕ್ಷಕರುಗಳು ಸಭೆಯಲ್ಲಿ ಹಾಜರಿದ್ದರು.

Related Articles

Advertisement
Previous
Next Post »