ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್

November 10, 2020

 


ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚುನಾವಣೆ ನೀತಿ ಸಂಹಿತ ಮುಗಿಯುತ್ತಿದ್ದಂತೆ ಆರಂಭವಾಗಲಿದ್ದು, ವರ್ಗಾವಣೆ ವೇಳಾಪಟ್ಟಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎನ್ನಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ವರ್ಗಾವಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದರೂ ಚುನಾವಣೆ ನೀತಿ ಸಂಹಿತೆಯಿಂದಾಗಿ ಪ್ರಕ್ರಿಯೆ ಆರಂಭಿಸಲು ಸಾಧ್ಯವಾಗಿರಲಿಲ್ಲ. ಇಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ನಾಳೆಯಿಂದ ನೀತಿ ಸಂಹಿತೆ ತೆರವಾಗಲಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ನವೆಂಬರ್ 18 ರಿಂದ ಆರಂಭಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಶಿಕ್ಷಕರ ವರ್ಗಾವಣೆಗೆ ಸಂಬಂಧ ಶಿಕ್ಷಕ ಮಿತ್ರ ಆಯಪ್ ನಲ್ಲಿ ಮಾಹಿತಿ ಅಪ್ ಲೋಡ್ ಜೊತೆಗೆ ಶಿಕ್ಷಕರ ಸೇವಾ ಮಾಹಿತಿ ಹಾಗೂ ಹೆಚ್ಚುವರಿ ಶಿಕ್ಷಕರ ಪಟ್ಟಿ ಇತ್ಯಾದಿಗಳನ್ನು ಇಲಾಖೆ ಸಿದ್ಧಪಡಿಸಿಕೊಂಡಿದೆ ಎನ್ನಲಾಗಿದೆ.

Related Articles

Advertisement
Previous
Next Post »