ದುಡಿದರೂ ವೇತನ ನೀಡದ ಸರ್ಕಾರ

November 13, 2020


 ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಐದು ತಿಂಗಳ ವೇತನವನ್ನು ಸರ್ಕಾರ ಬಿಡುಗಡೆ ಮಾಡುತ್ತಿದ್ದಂತೆಯೇ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಶಿಕ್ಷಕರೂ ವೇತನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

'ವಿಶೇಷ ಪ್ರಕರಣ ಎಂದು ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ ಮಾರ್ಚ್‌ನಿಂದ ಆಗಸ್ಟ್‌ವರೆಗಿನ ವೇತನ ಪಾವತಿಸಲು ₹55.70 ಕೋಟಿ ಬಿಡುಗಡೆ ಮಾಡಿದೆ. ಉಳಿದ ₹30.22 ಕೋಟಿ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದೂ ತಿಳಿಸಿದೆ. ಆದರೆ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ದುಡಿಯುತ್ತಿರುವ 532 ಸಿಬ್ಬಂದಿಗೆ ಏಳು ತಿಂಗಳಿನಿಂದ ವೇತನ ನೀಡಿಲ್ಲ' ಎಂದು ಶಿಕ್ಷಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.

Related Articles

Advertisement
Previous
Next Post »