ಸಿನಿಮಾ ಲೋಕ

ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ರಾಬರ್ಟ್’ ರಿಲೀಸ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ

 

ತೆರೆಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಏಪ್ರಿಲ್ 2ರಂದು ‘ರಾಬರ್ಟ್’ ಬಿಡುಗಡೆಯಾಗುವ ಸಾಧ್ಯತೆಯಿದೆ.

ಕೊರೋನಾ ಕಾರಣದಿಂದಾಗಿ ಸಿನಿಮಾ ಮಂದಿರ ಓಪನ್ ಆಗಿದ್ದರೂ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿದೆ. ಇತ್ತೀಚೆಗೆ ಸೋಂಕು ಕಡಿಮೆಯಾಗತೊಡಗಿತ್ತು ಬಿಗ್ ಬಜೆಟ್ ಸಿನಿಮಾ ಬಿಡುಗಡೆಗೆ ಸಿದ್ಧವಾಗತೊಡಗಿವೆ. ಡಿಸೆಂಬರ್ ಅಂತ್ಯಕ್ಕೆ ಇಲ್ಲವೇ ಜನವರಿಯಲ್ಲಿ ಬಹುನಿರೀಕ್ಷಿತ ‘ರಾಬರ್ಟ್’ ಬಿಡುಗಡೆಯಾಗುವ ಸಾಧ್ಯತೆ ಇತ್ತು. ಆದರೆ, ಚಿತ್ರಮಂದಿರಕ್ಕೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಏಪ್ರಿಲ್ 2 ರಂದು ‘ರಾಬರ್ಟ್’ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಚಿತ್ರಮಂದಿರ, ವ್ಯಾಪಾರ-ವಹಿವಾಟು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಪ್ರೇಕ್ಷಕರ ಸಂಖ್ಯೆ ಏರಿಕೆಯಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ‘ರಾಬರ್ಟ್’ ಸಿನಿಮಾ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.

Leave a Reply

Your email address will not be published.