ಬೆಂಗಳೂರು :ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 49,960 ರೂ. ಇದ್ದ ಬೆಲೆ ಇಂದು 50,410ಕ್ಕೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಗೆ 65,310 ರೂ. ಆಗಿದೆ.
ಅಲ್ಪ ಏರಿಳಿತಗಳನ್ನು ಬಿಟ್ಟರೆ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 50,410 ರೂ. ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 46,210 ರೂ. ಇದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,320 ರೂ.
ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕಡಿಮೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ.
Vijapur