ಭೋಪಾಲ್: 10 ಹಾಗೂ 12 ತರಗತಿಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಡಿಸೆಂಬರ್ 18 ರಿಂದ ಈ ತರಗತಿಗಳಿಗೆ ಪೂರ್ಣ ಪ್ರಮಾಣದ ನಿಯಮಿತ ತರಗತಿಗಳನ್ನು ನಡೆಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯ ಮಟ್ಟದಲ್ಲಿ ಶಾಲಾ ಪ್ರಾಂಶುಪಾಲರೊಂದಿಗೆ ಚರ್ಚಿಸಿದ ನಂತರ ಮತ್ತು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಬೋಧನಾ ಸಿಬ್ಬಂದಿಯ ಲಭ್ಯತೆಯ ಆಧಾರದ ಮೇಲೆ 9ನೇ ತರಗತಿ ಮತ್ತು 11 ತರಗತಿಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಹೇಳಿದ್ದಾರೆ.
ಇತ್ತೀಚಿಗೆ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರು ನಡೆಸಿದ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ದೇಶನಗಳನ್ನು ನೀಡಲಾಗಿದ್ದು, ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.