ತಾಜಾ ಸುದ್ದಿ

ಪಡಿತರ ಚೀಟಿದಾರರಿಗೊಂದು ‘ಎಚ್ಚರಿಕೆ ಸಂದೇಶ’ ನೀಡಿದ ರಾಜ್ಯ ಸರ್ಕಾರ!

 

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಸಿಗುವ ಅಕ್ಕಿ, ಬೆಳೆ, ಗೋದಿಯನ್ನ ಮುಕ್ತ ಮಾರುಕಟ್ಟೆಯಲ್ಲಿ ಹಣಕ್ಕಾಗಿ ಮಾರಾಟ ಮಾಡುವ ಫಲಾನುಭವಿಗಳ ಪಡಿತರ ಚೀಟಿ 6 ತಿಂಗಳು ಅಮಾನತು ಆಗಲಿದೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದ್ದು, ಅಕ್ರಮವಾಗಿ ಪಡಿತರ ಆಹಾರ ಧಾನ್ಯ ಮಾರಾಟಕ್ಕೆ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ಹಂಚಿಕೆಯಾಗುವ ಅಕ್ಕಿ(Rice)ಯನ್ನು ಫಲಾನುಭವಿಗಳು ಹಣಕ್ಕೆ ಮಾರಾಟ ಮಾಡುತ್ತಿರುವ ಪ್ರಕರಣಗಳು ಇಲಾಖೆ ಗಮನಕ್ಕೆ ಬಂದಿವೆ. ಹೀಗಾಗಿ ಅನ್ನಭಾಗ್ಯದ ಅಕ್ಕಿ ಮಾರಾಟ ಮಾಡಿ ಸಿಕ್ಕಿಬೀಳುವ ಫಲಾನುಭವಿಯ ಪಡಿತರ ಚೀಟಿ ಆರು ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುವುದು ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ.

Leave a Reply

Your email address will not be published.