ಶಿಕ್ಷಣ ಸುದ್ದಿ

ಪದವಿ ವಿದ್ಯಾರ್ಥಿಗಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಉಚಿತ ಟ್ಯಾಬ್ ವಿತರಣೆ

 

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಯೋಜನೆ ನಿಲ್ಲಿಸಿದ್ದ ಸರ್ಕಾರ ಟ್ಯಾಬ್ ನೀಡಲು ತೀರ್ಮಾನಿಸಲಾಗಿದೆ.

ಪ್ರತಿ ವಿದ್ಯಾರ್ಥಿಗೆ 10 ಸಾವಿರ ರೂಪಾಯಿ ಮೌಲ್ಯದ ಟ್ಯಾಬ್ಲೆಟ್ ಗಳನ್ನು ನೀಡಲಿದ್ದು, ಇದಕ್ಕಾಗಿ 155.40 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ. 1.55 ಲಕ್ಷ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಹೊಸ ವರ್ಷದ ಕೊಡುಗೆಯಾಗಿ ಟ್ಯಾಬ್ ನೀಡುವ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿದೆ.

ಹಿಂದೆ ಪ್ರತಿ ವರ್ಷ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡಲು ತೀರ್ಮಾನಿಸಲಾಗಿತ್ತು. ಅಕ್ರಮದ ಆರೋಪ ಕೇಳಿ ಬಂದ ಕಾರಣ ಯೋಜನೆ ಸ್ಥಗಿತಗೊಳಿಸಿದ್ದು, ಈಗ ಟ್ಯಾಬ್ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

2 Replies to “ಪದವಿ ವಿದ್ಯಾರ್ಥಿಗಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಉಚಿತ ಟ್ಯಾಬ್ ವಿತರಣೆ

Leave a Reply

Your email address will not be published.