ಚಲಿಸುತ್ತಿದ್ದ ರೈಲಿನ ಮೇಲೆ ಸ್ನೇಹಿತರ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 13 ವರ್ಷದ ಬಾಲಕನೊಬ್ಬ ಕರೆಂಟ್ ಹೊಡೆದು ಸಜೀವ ದಹನಗೊಂಡ ದಾರುಣ ಘಟನೆ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಸಂಭವಿಸಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೋವಿಡ್ ಐಸೋಲೇಷನ್ ಆಗಿ ಪರಿವರ್ತಿಸಲಾಗಿದ್ದ ಬೋಗಿಯಲ್ಲಿದ್ದ ಹುಡುಗರು ರೈಲಿನ ಮೇಲೆ ಏರಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಮೃತಪಟ್ಟ ಬಾಲಕನನ್ನು ಪಿ. ಸೂರ್ಯ ಎಂದು ಗುರುತಿಸಲಾಗಿದೆ. ಈತ ತನ್ನ ಇಬ್ಬರು ಸ್ನೇಹಿತರ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ. ಘಟನೆಯಲ್ಲಿ ಇನ್ನಿಬ್ಬರಿಗೂ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಲ್ದಾಣಕ್ಕೆ ತಲುಪಲು ಕೇವಲ 100 ಮೀ. ದೂರವಿದ್ದಾಗ ಈ ಘಟನೆ ನಡೆದಿದ್ದು, ಬೆಂಕಿಯಿಂದಾಗಿ ಭೋಗಿ ಕೂಡ ಹಾನಿಯಾಗಿದ್ದು ಕೂಡಲೇ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.