ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಜನವರಿ 1 ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯಸಿ ತರಗತಿಗಳು ಆರಂಭವಾಗಲಿದೆ.
ಇದರ ನಡುವೆ ಶಾಲೆ ಆರಂಭಕ್ಕೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಪೋಷಕರು ಪ್ರತಿಭಟನೆಗಿಳಿದಿದ್ದಾರೆ. ಖಾಸಗಿ ಶಾಲೆಗಳು ಶುಲ್ಕದ ಬಗ್ಗೆ ಸ್ಪಷ್ಟನೆ ನೀಡದಿರುವ ಹಿನ್ನೆಲೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ.
ಪೋಷಕರು ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಮನವಿಗೆ ಇಲಾಖೆ ಸ್ಪಂದಿಸಿದ ಹಿನ್ನೆಲೆ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ.