ವೇತನ ₹ 16,000: SSLC, ITI ಪಾಸಾದವರಿಗೆ ನೈರುತ್ಯ ರೈಲ್ವೆಯಲ್ಲಿ 1004 ಹುದ್ದೆಗಳು

December 17, 2020

ಬೆಂಗಳೂರು: ರೈಲ್ವೆ ಇಲಾಖೆಯ ನೈರುತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1004 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌, ಕೊಪರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ

ಒಟ್ಟು ಹುದ್ದೆಗಳ ಸಂಖ್ಯೆ: 1004

ಹುದ್ದೆಗಳ ವಲಯವಾರು ಹಂಚಿಕೆ
1) ಹುಬ್ಬಳ್ಳಿ - 287
2) ವರ್ಕ್‌ಶಾಪ್, ಹುಬ್ಬಳ್ಳಿ-217
3) ಬೆಂಗಳೂರು- 280
4) ಮೈಸೂರು- 177
5) ವರ್ಕ್‌ಶಾಪ್‌, ಮೈಸೂರು-43

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ( (ಫಿಟ್ಟರ್, ಮೆಕ್ಯಾನಿಕಲ್, ಇಲೆಕ್ಟ್ರೀಷಿಯನ್, ಟರ್ನರ್, ಕಾರ್‌ಪೆಂಟರ್, ಮೆಕ್ಯಾನಿಸ್ಟ್‌, ವೆಲ್ಡರ್ ಮತ್ತು ಸಂಬಂಧಿತ ಟ್ರೇಡ್‌) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ಮಾಸಿಕ ₹8,000 ರಿಂದ ₹16,000 ಭತ್ಯೆ ನೀಡಲಾಗುವುದು.

ವಯೋಮಿತಿ ಸಡಿಲಿಕೆ: 09 ಜನವರಿ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.


ನೇಮಕಾತಿ ವಿಧಾನ: ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌ ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 9 ಜನವರಿ, 2021

ಇಲ್ಲಿ ಕ್ಲಿಕ್ಕಿಸಿ: ಅಧಿಸೂಚನೆ ಲಿಂಕ್

ಆನ್‌ಲೈನ್‌ ಅರ್ಜಿ ಸಲ್ಲಿಸುವ ಲಿಂಕ್‌:

https://jobs.rrchubli.in/ActApprentice2020-21/

ವೆಬ್‌ಸೈಟ್‌: https://www.rrchubli.in/

Related Articles

Advertisement
Previous
Next Post »

1 komentar:

Write komentar