ಕಾಲೇಜು ಆರಂಭದ ಬೆನ್ನಲ್ಲೇ ಬಿಗ್ ಶಾಕ್ : ದಾವಣಗೆರೆಯ 17, ಚಾಮರಾಜನಗರ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

December 25, 2020

 


ದಾವಣಗೆರೆ - ಚಾಮರಾಜನಗರ : ಈಗಾಗಲೇ ರಾಜ್ಯದ ಅನೇಕ ಜನರಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೂ ಶಾಕ್ ಕೊಟ್ಟಿದೆ. ಒಂದೇ ಕಾಲೇಜಿನ ಸಾಲು ಸಾಲು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಡುವ ಮೂಲಕ, ಶಾಕ್ ನೀಡಿದೆ. ದಾವಣಗೆರೆಯ 17 ನರ್ಸಿಂಗ್ ವಿದ್ಯಾರ್ಥಿಗಳಿಗೆ ಹಾಗೂ ಚಾಮರಾಜನಗರದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ದಾವಣಗೆರೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಜಿಲ್ಲೆಯ ನರ್ಸಿಂಗ್ ಕಾಲೇಜು ಒಂದರ 17 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿರುವುದಾಗಿ ತಿಳಿಸಿದೆ.

ಇನ್ನೂ ಚಾಮರಾಜನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ.ರವಿ ಅವರು, ಮಾತನಾಡಿ ಜಿಲ್ಲೆಯ ನರ್ಸಿಂಗ್ ಕಾಲೇಜು ಒಂದರ 15 ವಿದ್ಯಾರ್ಥಿಗಳಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಅಂತಹ ವಿದ್ಯಾರ್ಥಿಗಳನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.


Related Articles

Advertisement
Previous
Next Post »