ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಕರ್ನಾಟಕ ಅಂಚೆ ವೃತ್ತದಲ್ಲಿ 2443 ಹುದ್ದೆಗಳಿಗೆ ಅರ್ಜಿ ಆಹ್ವಾನ

December 22, 2020

 


ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ಅಂಚೆ ವೃತ್ತದಲ್ಲಿ 2443 ಗ್ರಾಮೀಣ ದಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಜನವರಿ 20, 2021 ರೊಳಗೆ ಅರ್ಜಿ ಸಲ್ಲಿಸಬಹುದು. ಜನವರಿ 20,2021 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ : ಎಸ್‌ಎಸ್‌ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಇದಲ್ಲದೆ ಸೈಕ್ಲಿಂಗ್ ಜ್ಞಾನ ಅಥವಾ ಮೋಟಾರ್ ಸೈಕಲ್ ಡ್ರೈವ್ ಮಾಡುವ ಜ್ಞಾನವಿದ್ದರೆ ಅದನ್ನು ಪರಿಗಣಿಸಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂ.ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಇದೆ.

ವೇತನ ಶ್ರೇಣಿ : ಗ್ರಾಮೀಣ ದಕ್ ಸೇವಕ್ 12,000 ದಿಂದ 14000 ರೂ. ಇದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://www.appost.in/gdsonline/ ಗೆ ಭೇಟಿ ನೀಡಿ.

Related Articles

Advertisement
Previous
Next Post »