ಶಿಕ್ಷಣ ಸುದ್ದಿ

6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ-ಪ್ರಮಾದ ಸರಿಪಡಿಸುತ್ತೇವೆ ಎಂದ ಶಿಕ್ಷಣ ಸಚಿವರು

 

ಬೆಂಗಳೂರು: ರಾಜ್ಯ ಸರ್ಕಾರದ ಪಠ್ಯಕ್ರಮದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ರೀತಿಯ ಪಾಠವೊಂದಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆ, ಆಕ್ಷೇಪ ನಡೆಯುತ್ತಿದೆ.

ಈ ವಿಚಾರ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರ ಗಮನಕ್ಕೆ ಬಂದಿದ್ದು, ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಪಠ್ಯಪುಸ್ತಕದ ಪರಿಷ್ಕರಣೆಯಾಗಿಲ್ಲ, ಹೊಸ ಪಾಠವನ್ನು ಕೂಡ ಸೇರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಪ್ರಮಾದ ಆಗಿರಬಹುದಾದ ಸಾಧ್ಯತೆಯಿದ್ದು ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಮಂತ್ರಾಲಯದ ಸ್ವಾಮೀಜಿಯವರು ನನಗೆ ತಿಳಿಸಿದ್ದು ತಪ್ಪನ್ನು ಸರಿಪಡಿಸುವುದಾಗಿ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

Leave a Reply

Your email address will not be published.