ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ತುಮಕೂರಿನ ಕೈಗಾರಿಕಾ ನೋಡ್ ನಲ್ಲಿ 88,500 ಉದ್ಯೋಗ ಸೃಷ್ಟಿ

December 31, 2020
Thursday, December 31, 2020


 ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ನ ಭಾಗವಾಗಿ ತುಮಕೂರಿನಲ್ಲಿ ಕೈಗಾರಿಕಾ ನೋಡ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಇದರಿಂದಾಗಿ 88,500 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಗದೀಶ್ ಶೆಟ್ಟರ್, ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ನ ಭಾಗವಾಗಿ ತುಮಕೂರಿನಲ್ಲಿ ಕೈಗಾರಿಕಾ ನೋಡ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 1,701.81 ಕೋಟಿ ರೂ. ಮೀಸಲಿರಿಸಿದ್ದು, ಇದರಿಂದಾಗಿ ಅಂದಾಜು 88,500 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು.

ಈ ಮಹತ್ವಾಕಾಂಕ್ಷೆಯ ಕಾರಿಡಾರ್ ನ ಭಾಗವಾಗಿ ತುಮಕೂರು ನೋಡ್ ಗೆ ಅನುಮೋದನೆ ನೀಡಿರುವ ಪ್ರಧಾನಿ ಮೋದಿ ಮತ್ತು ಸಂಪುಟ ಸಹದ್ಯೋಗಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಅಭಿನಂನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Thanks for reading ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ತುಮಕೂರಿನ ಕೈಗಾರಿಕಾ ನೋಡ್ ನಲ್ಲಿ 88,500 ಉದ್ಯೋಗ ಸೃಷ್ಟಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ತುಮಕೂರಿನ ಕೈಗಾರಿಕಾ ನೋಡ್ ನಲ್ಲಿ 88,500 ಉದ್ಯೋಗ ಸೃಷ್ಟಿ

Post a Comment