ಖಾಸಗಿ ಶಾಲಾ ವಿದ್ಯಾರ್ಥಿಗಳಿಗೊಂದು 'ಶಾಕಿಂಗ್ ನ್ಯೂಸ್'..!

December 20, 2020
Sunday, December 20, 2020

 


ಬೆಂಗಳೂರು: ನಾಳೆಯಿಂದ ಖಾಸಗಿ ಶಾಲೆಗಳಲ್ಲಿ ಆನ್ ಲೈನ್, ಆಫ್ ಲೈನ್ ಕ್ಲಾಸ್ ಗಳನ್ನು ಬಂದ್ ಮಾಡಲಾಗುವುದು ಎಂದು ರುಪ್ಸಾ ಸಂಘಟನೆಯ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕೋಟೆ ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ 15 ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನಾಳೆಯಿಂದ ಹೋರಾಟ ಕೈಗೊಳ್ಳಲಾಗುವುದು. ನಾಳೆ ಮತ್ತೆ ಶಿಕ್ಷಣ ಸಚಿವ(Education Minister)ರಿಗೆ ನಮ್ಮ ಬೇಡಿಕೆಗಳನ್ನು ಮತ್ತೆ ತಿಳಿಸುತ್ತೇವೆ. ಇದಾದ ನಂತರ ಎಲ್ಲ ಶೈಕ್ಷಣಿಕ ಚಟುವಟಿಕೆ ನಿಲ್ಲಿಸುತ್ತೇವೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ.

ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದು ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ರಾಜ್ಯದ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಎಲ್ಲರೂ ಬೀದಿಗಿಳಿಯುವಂತಾಗಿದೆ.


ಈ ಗೊಂದಲದಿಂದಾಗಿ ಬಹಳ ಮುಖ್ಯವಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಸ್ಪಷ್ಟನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಬೇಕು. ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Thanks for reading ಖಾಸಗಿ ಶಾಲಾ ವಿದ್ಯಾರ್ಥಿಗಳಿಗೊಂದು 'ಶಾಕಿಂಗ್ ನ್ಯೂಸ್'..! | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಖಾಸಗಿ ಶಾಲಾ ವಿದ್ಯಾರ್ಥಿಗಳಿಗೊಂದು 'ಶಾಕಿಂಗ್ ನ್ಯೂಸ್'..!

Post a Comment