ಶಾಲೆಗಳ ಪುನರಾರಂಭ ಕುರಿತು ಸರ್ಕಾರದಲ್ಲೇ ಗೊಂದಲದಲ್ಲಿದೆ: ಡಿ.ಕೆ.ಶಿವಕುಮಾರ್

December 23, 2020

 


ಬೆಂಗಳೂರು: ಶಾಲೆಗಳ ಪುನರಾರಂಭ ಕುರಿತು ಸರ್ಕಾರವೇ ಗೊಂದಲದಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಕ್ಕಳು ಮತ್ತು ಶಾಲೆ ವಿಚಾರದಲ್ಲಿ ಪ್ರತಿ ನಿಮಿಷವೂ ಗೊಂದಲದಲ್ಲಿದೆ. ನಮ್ಮ ಶಿಕ್ಷಣ ಸಚಿವರು ಸಿಎಂ, ಶಾಲೆ ಆಡಳಿತ ಮಂಡಳಿ, ಪೋಷಕರ ಜತೆ ಮಾತನಾಡುವುದಾಗಿ ಹೇಳುತ್ತಾರೆ. ಸರ್ಕಾರ ಮೊದಲು ಗೊಂದಲ ನಿವಾರಣೆ ಮಾಡಬೇಕು. ಇಷ್ಟು ದಿನ ಸಂಸ್ಥೆಗಳು ನಡೆಯುತ್ತಿರಲಿಲ್ಲ. ಶಿಕ್ಷಕರಿಗೂ ಸಂಬಳ ನೀಡಬೇಕು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಶಾಲೆ ತೆರೆಯಬೇಕೋ ಬೇಡವೋ ಎಂಬುದರ ಬಗ್ಗೆ ತಜ್ಞರ ಜತೆ ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ.

ರಾಜಕಾರಣಿಗಳು ಏನೇ ಅಭಿಪ್ರಾಯ ಹೇಳಿದರೂ ಅಂತಿಮವಾಗಿ ವಿದ್ಯಾರ್ಥಿಗಳು, ಶಾಲೆಗಳು ಹಾಗೂ ಶಿಕ್ಷಕರ ಹಿತ ಹಾಗೂ ಭವಿಷ್ಯ ಕಾಯಬೇಕು.

ನಾವು ರಾಜಕೀಯ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳುವುದಕ್ಕಿಂತ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಹಾಗೂ ಆ ತೀರ್ಮಾನದಲ್ಲಿ ಸ್ಪಷ್ಟತೆ ಇರಬೇಕು. ಪೋಷಕನಾಗಿ, ಶಿಕ್ಷಣ ಸಂಸ್ಥೆಯ ಭಾಗವಾಗಿ ನಮಗೂ ಆತಂಕಗಳಿವೆ. ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬ ಗೊಂದಲ ಇದೆ ಎಂದು ತಿಳಿಸಿದ್ದಾರೆ.

Related Articles

Advertisement
Previous
Next Post »