ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ನಿನ್ನೆಗಿಂತಲೂ ಭಾರೀ ಏರಿಕೆ

December 08, 2020
Tuesday, December 8, 2020

 


ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು 1280 ಜನರಿಗೆ ಹೊಸದಾಗಿ ಪಾಸಿಟಿವ್ ವರದಿ ಬಂದಿದೆ.

ನಿನ್ನೆ 998 ಜನರಿಗೆ ಸೋಂಕು ತಗುಲಿತ್ತು. ಇಂದು 1280 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,95,284 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 13 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,880 ಜನ ಮೃತಪಟ್ಟಿದ್ದಾರೆ. ಇಂದು 1060 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,58,370 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 638 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,75,163 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 7 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4197 ಜನ ಸಾವನ್ನಪ್ಪಿದ್ದಾರೆ.

3,54,497 ಜನರಿಗೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 19,468 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ www.suddimarga.in ಗೆ ಭೇಟಿ ನೀಡಿ 

Thanks for reading ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ನಿನ್ನೆಗಿಂತಲೂ ಭಾರೀ ಏರಿಕೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ನಿನ್ನೆಗಿಂತಲೂ ಭಾರೀ ಏರಿಕೆ

Post a Comment