ಕುತೂಹಲ ಮೂಡಿಸಿದೆ ಸಿಎಂ ಯಡಿಯೂರಪ್ಪ ಪ್ರೆಸ್ ಮೀಟ್: ಮಹತ್ವದ ಘೋಷಣೆ ಸಾಧ್ಯತೆ

December 30, 2020
Wednesday, December 30, 2020

 


ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಟಿ ಕರೆದಿದ್ದು, ನೈಟ್ ಕರ್ಫ್ಯೂ, ಲಾಕ್ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನೈಟ್ ಕರ್ಫ್ಯೂ ಜಾರಿಗೊಳಿಸುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಅವರು ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಹೇಳಿದ್ದು, ಗೊಂದಲ ಮೂಡಿಸಿದೆ.

ಸಿಎಂ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ಅತಿದೊಡ್ಡ ಘೋಷಣೆ ಮಾಡುತ್ತಾರೆ ಎನ್ನುವ ನಿರೀಕ್ಷೆ ಇದ್ದು, ಗೊಂದಲಕ್ಕೆ ಮಧ್ಯಾಹ್ನ ತೆರೆ ಬೀಳಲಿದೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ರೂಪಾಂತರ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಇಲ್ಲವೇ ಕಠಿಣ ನಿಯಮ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹೊಸ ವರ್ಷಾಚರಣೆ ವೇಳೆ ಸೋಂಕು ತಡೆಗೆ ಅಗತ್ಯವಾದರೆ ರಾಜ್ಯಗಳು ನೈಟ್ ಕರ್ಫ್ಯೂ ಸೇರಿ ನಿಯಮ ಜಾರಿಗೊಳಿಸಬಹುದೆಂದು ಕೇಂದ್ರ ಸರ್ಕಾರ ಹೇಳಿರುವುದರಿಂದ ಸಿಎಂ ಪತ್ರಿಕಾಗೋಷ್ಠಿಯ ಬಗ್ಗೆ ಕುತೂಹಲ ಹೆಚ್ಚಾಗಿದೆ ಎನ್ನಲಾಗಿದೆ.

Thanks for reading ಕುತೂಹಲ ಮೂಡಿಸಿದೆ ಸಿಎಂ ಯಡಿಯೂರಪ್ಪ ಪ್ರೆಸ್ ಮೀಟ್: ಮಹತ್ವದ ಘೋಷಣೆ ಸಾಧ್ಯತೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಕುತೂಹಲ ಮೂಡಿಸಿದೆ ಸಿಎಂ ಯಡಿಯೂರಪ್ಪ ಪ್ರೆಸ್ ಮೀಟ್: ಮಹತ್ವದ ಘೋಷಣೆ ಸಾಧ್ಯತೆ

Post a Comment