'ವರ್ಗಾವಣೆ ನಿರೀಕ್ಷೆ'ಯಲ್ಲಿ ಶಿಕ್ಷಕರಿಗೆ ಬಿಗ್ ಶಾಕ್ : ತಾತ್ಕಾಲಿಕವಾಗಿ 'ಶಿಕ್ಷಕರ ವರ್ಗಾವಣೆ' ಸ್ಥಗಿತ

December 24, 2020

 


ಬೆಂಗಳೂರು : 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಕಡ್ಡಾಯವಾಗಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲು ಚಾಲನೆ ನೀಡಲಾಗಿತ್ತು. ಆದ್ರೇ, ಕರ್ನಾಟಕ ಆಡಳಿತ ನ್ಯಾಯಮಂಡಳಿಯು, ಯಥಾ ಸ್ಥಿತಿಯಲ್ಲಿ ಕಾಪಾಡಲು ಆದೇಶಿಸಿದೆ. ಹೀಗಾಗಿ ತಾತ್ಕಾಲಿಕವಾಗಿ ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸ್ಥಗಿತಗೊಂಡಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಅನ್ಬುಕುಮಾರ್.ವಿ ಅವರು, 2020-21ನೇ ಸಾಲಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳು ವೃಂದದ ಶಿಕ್ಷಕರುಗಳ ವರ್ಗಾವಣೆಗಳನ್ನು ನಡೆಸುವ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲಾಗಿತ್ತು.

ವರ್ಗಾವಣೆ ಸಂಬಂಧ ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಉಲ್ಲೇಖ(8)ರನ್ವಯ ಅರ್ಜಿಗಳನ್ನು ದಾಖಲಿಸಿರುವುದರಿಂದ, ಮಾನ್ಯ ನ್ಯಾಯಾಲಯವು ಯಥಾ ಸ್ಥಿತಿಯನ್ನು ಕಾಪಾಡಲು ಆದೇಶಿಸಿದೆ. ಆದ್ದರಿಂದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈ ಕಾರ್ಯಲಯದ ಮುಂದಿನ ಆದೇಶದವರೆವಿಗೂ ಯಥಾ ಸ್ಥಿತಿಯನ್ನು ಕಾಪಾಡುವಂತೆ ತಿಳಿಸಿದ್ದಾರೆ. ಹೀಗಾಗಿ 2020-21ನೇ ಸಾಲಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳು ವೃಂದದ ಶಿಕ್ಷಕರುಗಳ ವರ್ಗಾವಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಂತೆ ಆಗಿದೆ.

ವರದಿ : ವಸಂತ ಬಿ ಈಶ್ವರಗೆರೆ
Related Articles

Advertisement
Previous
Next Post »