10 ನೇ ತರಗತಿ ಪಾಸಾದವರಿಗೆ ಗೃಹರಕ್ಷಕದಳ ನೇಮಕಾತಿಗೆ ಅರ್ಜಿ ಆಹ್ವಾನ

January 03, 2021

 


ಮೈಸೂರು: ಗೃಹರಕ್ಷಕ ಸ್ವಯಂಸೇವಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಗೃಹರಕ್ಷಕದಳ ಕಚೇರಿ ವ್ಯಾಪ್ತಿಯ ನಗರ ಮತ್ತು ತಾಲ್ಲೂಕು ಘಟಕಗಳಲ್ಲಿನ ಖಾಲಿ ಇರುವ ಗೃಹರಕ್ಷಕ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ನಾಗರಿಕರಾಗಿರುವ 10 ನೇ ತರಗತಿಯಲ್ಲಿ ಉತ್ತೀರ್ಣರಾದ, 19 ವರ್ಷ ಮೇಲ್ಪಟ್ಟ ಮತ್ತು 45 ವರ್ಷದೊಳಗಿನ, ಉತ್ತಮ ದೇಹದಾರ್ಢ್ಯತೆ ಹೊಂದಿರುವ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 6 ರಿಂದ ಗೃಹರಕ್ಷಕದಳ ಕಚೇರಿಯಲ್ಲಿ ಅರ್ಜಿ ನೀಡಲಿದ್ದು, ಜನವರಿ 31 ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

ಆಧಾರ್ ಕಾರ್ಡ್, ರೇಷನ್ ಕಾರ್ಡ್ ಜೆರಾಕ್ಸ್, ಎಸ್‌ಎಸ್‌ಎಲ್ಸಿ ಅಂಕಪಟ್ಟಿ, ವರ್ಗಾವಣೆ ಪತ್ರ ಜೆರಾಕ್ಸ್, ವಾಸಸ್ಥಳ ದೃಢೀಕರಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆ ಸಹಿತ ಅರ್ಜಿ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗೆ 0821- 2542877 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Related Articles

Advertisement
Previous
Next Post »