ರಾಜ್ಯದ 'ಸರ್ಕಾರಿ ನೌಕರ'ರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ 2021ನೇ ಸಾಲಿನ 'ಗಳಿಕೆ ರಜೆ ಅಧ್ಯರ್ಪಿಸಿ ನಗಧೀಕರಣ'ಕ್ಕೆ ಅನುಮತಿ

January 28, 2021

 


ಬೆಂಗಳೂರು : 2021ನೇ ಸಾಲಿನ ಬ್ಲಾಕ್ ಅವಧಿಗೆ ಗರಿಷ್ಟ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಆಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯ ಪಡೆಯುವ ಯೋಜನೆಯನ್ನು ತಕ್ಷಣದಿಂದ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ 2021ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನೀಡುವ ಮೂಲಕ, ಭರ್ಜರಿ ಸಿಹಿ ಸುದ್ದಿ ನೀಡಿದೆ.

ಈ ಕುರಿತಂತೆ ಆರ್ಥಿಕ ಇಲಾಖೆ(ಸೇವೆಗಳು-1 &3) ಸರ್ಕಾರದ ಅಧೀನ ಕಾರ್ಯದರ್ಶಿಯಾದ ಹೆಚ್.ಆರ್.ಲಲಿತ ಅವರು ನಡಾವಳಿ ಹೊರಡಿಸಿದ್ದು, ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ 118(2)ರ ಸೌಲಭ್ಯ ಪಡೆಯುವ ಸಲುವಾಗಿ, ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ ( ಆಯಾ ವರ್ಷದ ಜನವರಿ 1ರಿಂದ ಡಿಸೆಂಬರ್ 31ರೊಳಗೆ) 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಅಧ್ಯರ್ಪಿಸಿ, ರಜಾ ವೇತನಕ್ಕೆ ಸಮನಾದ ನಗದೀಕರಣ ಪಡೆಯಬಹುದಾದ ಸೌಲಭ್ಯವನ್ನು ದಿನಾಂಕ 01-01-2013ರಿಂದ ಜಾರಿಗೊಳಿಸಲಾಗಿದೆ.

ಕೋವಿಡ್-19ರ ಹಿನ್ನಲೆಯಲ್ಲಿ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಹಿನ್ನಲೆಯಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷ ದಿನಾಂಕ 01-01-2021 ರಿಂದ ದಿನಾಂಕ 31-12-2021ರವರೆಗಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಿ, ಆದೇಶಿಸಿತ್ತು.

ಪ್ರಸಕ್ತ ಸರ್ಕಾರವು 2021ನೇ ಸಾಲಿನ ಅವಧಿಯ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಅವಕಾಶವನ್ನು ಪುನರುಜ್ಜೀವನಗೊಳಿಸಲು ಉದ್ದೇಶಿಸಿದ್ದು, ಈ ಹಿನ್ನಲೆಯಲ್ಲಿ ದಿನಾಂಕ 04-01-2021ರಂದು ಹೊರಡಿಸಿದ್ದಂತ ಆದೇಶವನ್ನು ಹಿಂಪಡೆಯಲಾಗಿದೆ. ಅಲ್ಲದೇ ಈ ಕೆಳಗಿನಂತೆ ಆದೇಶಿಸಲಾಗಿದೆ.

2021ನೇ ಸಾಲಿನ ಬ್ಲಾಕ್ ಅವಧಿಗೆ ಗರಿಷ್ಟ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯ ಪಡೆಯುವ ಯೋಜನೆಯನ್ನು ತಕ್ಷಣದಿಂದ ಜಾರಿಗೊಳಿಸಿ ಆದೇಶಿಸಿದೆ.

ಎಲ್ಲಾ ವೃಂದದ ಅರ್ಹ ಅಧಿಕಾರಿ, ನೌಕರರು ಒಂದು ತಿಂಗಳ ಮುಂಚಿತ ನೋಟಿಸ್ ನೀಡಿ ಜನವರಿ 2021ರಿಂದ ಡಿಸೆಂಬರ್ 2021ರವರೆಗಿನ ಅವಧಿಯಲ್ಲಿ ಅವರ ಇಚ್ಚೆಯಂತೆ ಯಾವುದೇ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನೆ ಪಡೆಯಲು ಅರ್ಹರಾಗಿರುತ್ತಾರೆ.

ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2021ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್ ಆರ್ ಎಂ ಎಸ್ ನಲ್ಲಿ ಲಭ್ಯವಿರುವ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮ ವಹಿಸತಕ್ಕದ್ದು ಎಂಬುದಾಗಿ ಆದೇಶದಲ್ಲಿ ತಿಳಿಸಿದೆ.

ವರದಿ : ವಸಂತ ಬಿ ಈಶ್ವರಗೆರೆ

Related Articles

Advertisement
Previous
Next Post »