BIG NEWS : ಇಂದು 'SSLC' , 'ದ್ವಿತೀಯ ಪಿಯುಸಿ' ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

January 06, 2021
Wednesday, January 6, 2021

 


ಬೆಂಗಳೂರು : ಇಂದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಮೇ 2 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದೆ ಹಾಗೂ ಜೂನ್ ಮೊದಲನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಶುರುವಾಗಲಿದೆ, ಗುರುವಾರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇನ್ನೂ, ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಠ್ಯ ಕಡಿತದ ಬಗ್ಗೆ ಗುರುವಾರ ಮಾಹಿತಿ ನೀಡಲಾಗುವುದು, 1 ರಿಂದ 9 ನೇ ತರಗತಿಯ ಪಠ್ಯ ಕಡಿತ ಮಾಡುವುದಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆ ಏಳೆಂಟು ತಿಂಗಳು ಶಾಲಾ ಕಾಲೇಜು ಬಂದ್ ಆಗಿತ್ತು. ಜನವರಿ 1 ರಿಂದ ದ್ವಿತೀಯ ಪಿಯುಸಿ ತರಗತಿ ಹಾಗೂ ಎಸ್ ಎಸ್ ಎಲ್ ಸಿ ತರಗತಿ ಆರಂಭವಾಗಿದೆ. ರಾಜ್ಯದೆಲ್ಲೆಡೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಪಾಠ ಪ್ರವಚನಗಳು ನಡೆಯುತ್ತಿದೆ.


Thanks for reading BIG NEWS : ಇಂದು 'SSLC' , 'ದ್ವಿತೀಯ ಪಿಯುಸಿ' ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIG NEWS : ಇಂದು 'SSLC' , 'ದ್ವಿತೀಯ ಪಿಯುಸಿ' ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Post a Comment