ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ

January 27, 2021
Wednesday, January 27, 2021

 


ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಗ್ರಾಮೀಣಾ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ 2020-21 ನೇ ಹಣಕಾಸು ವರ್ಷದ ಎರಡನೇ ಕಂತಿನ ಅನುದಾನ 2412 ಕೋಟಿ ರೂ. ಬಿಡುಗಡೆ ಮಾಡಿದೆ.

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಶಿಫಾರಸಿನ ಮೇಲೆ ಕೇಂದ್ರ ಹಣಕಾಸು ಸಚಿವಾಲಯ 18 ರಾಜ್ಯಗಳಿಗೆ ಒಟ್ಟು 12,351 ಕೋಟಿ ರೂ. ಬಿಡುಗಡೆ ಮಾಡಿದೆ. ಒಟ್ಟಾರೆ ಈ ಹಣ ಬಿಡುಗಡೆಯಾದ 10 ದಿನದೊಳಗೆ ರಾಝ್ಯ ಸರ್ಕಾರವು ಗ್ರಾಮೀಣಾ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕು. ಇಲ್ಲದಿದ್ದರೆ ಅನುದಾನ ಬಡ್ಡಿ ಸಮೇತ ನೀಡಬೇಕು ಎಂದು ಕೇಂದ್ರ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಈ ಅನುದಾನವು ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ, ಜಲ್ಲಾಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಹಂಚಲ್ಪಡಲಿದೆ.

Thanks for reading ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ

Post a Comment