ಬೆಂಗಳೂರು: ರಾಜ್ಯದಲ್ಲಿರುವ 5492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 4,24 ,250 ವಿದ್ಯಾರ್ಥಿಗಳ ಪೈಕಿ ಮಂಗಳವಾರ 2,42,886 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
(ಶೇ.57.25 ಹಾಜರಿ) ಅಂತೆಯೇ 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,77,051 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.(ಶೇ.51.34 ಹಾಜರಾತಿ)ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
6 ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಮಂಗಳವಾರ 6,30,557 ವಿ ದ್ಯಾರ್ಥಿಗಳು ಹಾಜರಾಗಿದ್ದಾರೆ.ಪ್ರಸ್ತುತ ವರ್ಷದ ಶಾಲಾರಂಭದ ಐದನೇ ದಿನವಾದ ಮಂಗಳವಾರ ವಿದ್ಯಾರ್ಥಿ ಗಳ ಹಾಜರಾತಿ ಯಥಾಸ್ಥಿತಿಯಲ್ಲಿ ಮುಂದುವರೆದಿದ್ದು,ಶಾಲಾ ಕಾಲೇಜುಗಳನ್ನು ಆರಂಭಿಸಿರು ವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ ಎಂದು ಅವರು ತಿಳಿಸಿದ್ದಾರೆ.
EmoticonEmoticon