ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮತ್ತೊಂದು ಶುಭಸುದ್ದಿ : ದೃಷ್ಟಿ ದೋಷವುಳ್ಳ ಮಕ್ಕಳಿಗೆ ಉಚಿತ ಕನ್ನಡಕ

January 04, 2021

 


ಬೆಂಗಳೂರು : ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಜನವರಿ 20 ರ ಬಳಿಕ ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ನಡೆಯಲಿದ್ದು, ಬಳಿಕ ಅಗತ್ಯವಿದ್ದವರಿಗೆ ಕನ್ನಡಕ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹೌದು, ರಾಜ್ಯದ 1 ರಿಂದ 10 ತರಗತಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ನೇತ್ರ ತಪಾಸಣೆ ನಡೆಯಲಿದ್ದು, ದೃಷ್ಟಿದೋಷವಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಕನ್ನಡಕವನ್ನು ವಿತರಿಸಲು ಮುಂದಾಗಿದೆ.


Related Articles

Advertisement
Previous
Next Post »