ಬೆಂಗಳೂರು : ರಾಜ್ಯದಲ್ಲಿ ಇಂದು 464 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,38, 865 ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು ರಾಜ್ಯದಲ್ಲಿ 547 ಸೋಂಕಿತರು ಕೊರೊನಾ ಸೋಂಕಿನಿಂದ ಗುಣಮುಖರಾದರೆ, ಇದುವರೆಗೆ 9,20, 657 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಇಂದು ಇಬ್ಬರು ಬಲಿಯಾಗಿದ್ದು, ಇದುವರೆಗೆ 12,213 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 5976 ಪಾಸಿಟಿವ್ ಕೇಸ್ ಗಳಿದ್ದು, ಈ ಪೈಕಿ 147 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
EmoticonEmoticon