SSC CGL Recruitment 2021: 6506 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

January 04, 2021

 


ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2020ರ ಅಧಿಸೂಚನೆ ಹೊರಡಿಸಿದೆ. 6506 ಗ್ರೂಪ್ ಬಿ ಮತ್ತು ಗ್ರೂಪ್ ಸಿಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಬಹುದು.

ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಎಸ್‌ಎಸ್‌ಸಿ ಸಿಜಿಎಲ್ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಫೆಬ್ರವರಿ 2,2021ರ ರಾತ್ರಿ 11:30ರೊಳಗೆ ಮತ್ತು ಆಫ್‌ಲೈನ್ ಮೂಲಕ ಫೆಬ್ರವರಿ 6,2021ರೊಳಗೆ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಮಹಿಳಾ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 31,2021ರ ರಾತ್ರಿ 11:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಯ ಅಧಿಸೂಚನೆಯನ್ನು ಓದಲು ಇಲ್ಲಿ

Related Articles

Advertisement
Previous
Next Post »