ನಿರುದ್ಯೋಗಿಗಳಿಗೆ ಶುಭ ವಾರ್ತೆ : 18 ರಂದು ಉದ್ಯೋಗ ಮೇಳ

February 12, 2021
Friday, February 12, 2021

 


ಚಿತ್ರದುರ್ಗ : ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ(ಎನ್‍ಸಿಎಸ್‍ಪಿ) ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಫೆ.18ರ ಬೆಳಿಗ್ಗೆ 10ರಿಂದ ಸಂಜೆ 4 ರವರೆಗೆ ಹಿರಿಯೂರು ತಾಲ್ಲೂಕಿನ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 15 ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲು ಭಾಗವಹಿಸಲಿದ್ದಾರೆ. ಆಸಕ್ತರು ಅಗತ್ಯ ದಾಖಲೆಗಳಾದ ಬಯೊಡಾಟಾ 8 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್ ತರತಕ್ಕದು. ಸಂದರ್ಶದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಚಿತ್ರದುರ್ಗ 08194-230485, 7022459064, 8105619020, 8073037905 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Thanks for reading ನಿರುದ್ಯೋಗಿಗಳಿಗೆ ಶುಭ ವಾರ್ತೆ : 18 ರಂದು ಉದ್ಯೋಗ ಮೇಳ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ನಿರುದ್ಯೋಗಿಗಳಿಗೆ ಶುಭ ವಾರ್ತೆ : 18 ರಂದು ಉದ್ಯೋಗ ಮೇಳ

Post a Comment