ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಶಾಲಾ, ಕಾಲೇಜಿಗೆ ಫೆ. 20 ರವರೆಗೂ ಪ್ರವೇಶ

February 07, 2021


 ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ನೀಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗೆ ಫೆಬ್ರವರಿ 20 ರವರೆಗೆ ಅವಕಾಶ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಫೆಬ್ರವರಿ 1 ರಿಂದ 9 ರಿಂದ 12 ನೇ ತರಗತಿ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ನಡೆಯುತ್ತಿವೆ. ವಿವಿಧ ಭಾಗಗಳಲ್ಲಿ ಸಾಕಷ್ಟು ವಿದ್ಯಾರ್ಥಿಗಳು ದಾಖಲಾತಿ ಪಡೆದಿಲ್ಲ.

ಹೀಗಾಗಿ ವಿದ್ಯಾರ್ಥಿಗಳು ದಾಖಲಾತಿ ಪಡೆಯುವ ಉದ್ದೇಶದಿಂದ ದಾಖಲಾತಿಯನ್ನು ಫೆಬ್ರವರಿ 20 ರವರೆಗೆ ಕಾಲಾವಕಾಶ ವಿಸ್ತರಿಸಿ ಆದೇಶ ಹೊರಡಿಸಲು ಸಚಿವ ಸುರೇಶ್ ಕುಮಾರ್ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಟಿಪ್ಪಣಿ ಹೊರಡಿಸಿದ್ದಾರೆ.


Related Articles

Advertisement
Previous
Next Post »