ಜಾರಕಿಹೊಳಿಯನ್ನು ನಾವೆ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

February 23, 2021
Tuesday, February 23, 2021


 ಬೆಳಗಾವಿ: ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ಮಂತ್ರಿ ಮಾಡುವಂತೆ ನಾವೇ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದೇವೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ

ಲಕ್ಷ್ಮೀ ಹೆಬ್ಬಾಳ್ಕರ್ ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಯಾರಿಗೂ ಶೋಭೆ ತರುವುದಿಲ್ಲ. ಅಭಿವೃದ್ಧಿ ಪರ ರಾಜಕಾರಣ ಬೆಂಬಲಿಸಬೇಕು. ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ ಎಂದು ಹೇಳಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್​ನ ಬಸ್ ನಿಲ್ದಾಣದಲ್ಲಿ ಹುಡುಕಬೇಕಾಗುತ್ತೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ತಿರುಗೇಟು ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ನಾನು ರಾಮನ ಭಕ್ತೆ, ರಾಮಮಂದಿರಕ್ಕೆ 2 ಲಕ್ಷ ಕೊಟ್ಟಿದ್ದೇನೆ. ರಾಮನ ಪಕ್ಷದಲ್ಲಿ ಒಬ್ಬ ಮಹಿಳೆ ಬಗ್ಗೆ ಆಡುತ್ತಿರುವ ಮಾತುಗಳನ್ನು ಜನ ನೋಡುತ್ತಿದ್ದಾರೆ. ಆಕೆ, ಈಕೆ ಎನ್ನುವುದು, ಬಸ್ ನಿಲ್ದಾಣದಲ್ಲಿ ಹುಡುಕಬೇಕು, ಹಾಸ್ಪಿಟಲ್‌ಗೆ ಅಡ್ಮಿಟ್ ಮಾಡಬೇಕು ಎನ್ನುವುದು ಶೋಭೆ ತರುವ ವಿಚಾರವಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


ಪಶ್ಚಿಮ ಬಂಗಾಳದಲ್ಲಿ ಬಾಂಬ್ ದಾಳಿ; ಟಿಎಂಸಿ ಕಾರ್ಯಕರ್ತ ಸಾವು
ಕೋಲ್ಕತ್ತಾ, ಫೆಬ್ರವರಿ 24: ಪಶ್ಚಿಮ ಬಂಗಾಳದಲ್ಲಿ ಬಾಂಬ್ ದಾಳಿ ನಡೆದಿದ್ದು, ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ. ಮೂವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬಾಂಬ್ ದಾಳಿಯಲ್ಲಿ ಮೃತಪಟ್ಟವರನ್ನು ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತ ಸೌವಿಕ್ ದೊಲೈ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರನ್ನು ಮಿಡ್ನಾಪುರದ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.

ಸ್ವಂತ ಮಗಳನ್ನು ಬಂಗಾಳ ಬಯಸುತ್ತದೆ; ತೃಣಮೂಲ ಕಾಂಗ್ರೆಸ್‌ ಹೊಸ ಘೋಷಣೆ

ನಾಲ್ವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮಕ್ರಾಂಪುರದಲ್ಲಿ ರಾತ್ರಿ ರಸ್ತೆ ಬದಿ ಮಾತನಾಡುತ್ತಾ ನಿಂತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಬಾಂಬ್‌ ಎಸೆದಿದ್ದಾರೆ. ಅಲ್ಲಿಂದ ಓಡಲು ನೋಡಿದ ದೊಲೈ ಮೇಲೆ ಗುಂಡು ಹಾರಿಸಿದ್ದಾರೆ. ದೊಲೈ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಘಟನೆಗೆ ಬಿಜೆಪಿಯವರೇ ಕಾರಣ ಎಂದು ಸ್ಥಳೀಯ ಟಿಎಂಸಿ ನಾಯಕರು ಆಕ್ಷೇಪಿಸಿದ್ದು, ತೃಣಮೂಲ ಕಾಂಗ್ರೆಸ್ ಒಳಜಗಳದಿಂದ ಈ ಘಟನೆ ನಡೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಮಿತ್ ದಾಸ್ ಆರೋಪಿಸಿದ್ದಾರೆ.

ನಾವು ಹಿಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಉತ್ತಮ ಮತಗಳನ್ನು ಪಡೆದಿದ್ದೆವು. ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ನಮ್ಮನ್ನು ಗೆಲುವಿನಿಂದ ತಡೆಯಲು ಈ ರೀತಿ ಮಾಡಲಾಗಿದೆ. ಇದು ಬಿಜೆಪಿಯದ್ದೇ ಕೆಲಸ ಎಂದು ಟಿಎಂಸಿ ಜಿಲ್ಲಾ ಅಧ್ಯಕ್ಷ ಅಜಿತ್ ಮೈಟಿ ಆರೋಪಿಸಿದ್ದಾರೆ.

ಇದೇ ಏಪ್ರಿಲ್- ಮೇ ತಿಂಗಳಿನಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ತೃಣಮೂಲ ಹಾಗೂ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.

Thanks for reading ಜಾರಕಿಹೊಳಿಯನ್ನು ನಾವೆ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಜಾರಕಿಹೊಳಿಯನ್ನು ನಾವೆ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

Post a Comment