ಅವಿನಾಶ್, ಆರ್ ಭೀಮಸಂದ್ರ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ಇನ್ಸಪೆಕ್ಟರಗಳ (ಸಿವಿಲ್) ಒಟ್ಟು 545 ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ಜನವರಿ 22 ರಿಂದ ಫೆಬ್ರವರಿ 22 ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪರಿಶಿಷ್ಟ ಜಾತಿ, ಪಂಗಡದ ವರ್ಗದವರಿಗೆ 250 ರೂ. ಮತ್ತು ಇತರರಿಗೆ 500 ರೂ.ಗಳಾಗಿರುತ್ತದೆ. ಶುಲ್ಕ ಪಾವತಿಗ ಕೊನೆಯ ದಿನ ಫೆಬ್ರವರಿ 24 ಆಗಿದೆ.
ವಿದ್ಯಾರ್ಹತೆ: ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಾಮಾನ್ಯ ವರ್ಗ, ಪ್ರವರ್ಗ 2(ಎ),2(ಬಿ),3(ಎ),3(ಬಿ) ಸೇರಿದ ಅಭ್ಯರ್ಥಿಗಳಿಗೆ ರೂ 500/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 250 /- ಶುಲ್ಕ ಫೆ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಫೆ. 24 ರಂದು ಕೊನೆಯ ದಿನವಾಗಿದೆ ಎಂದು ಪಿ.ಎಸ್.ಐ ನೇಮಕಾತಿ ಸಮಿತಿ ಅಧ್ಯಕ್ಷರು ಹಾಗೂ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೋಲಿಸ್ ತಿಳಿಸಿದ್ದಾರೆ. ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅದಿಕೃತ ವೆಬ್ಸೈಟ್ www.recruitment.ksp.gov.inನಲ್ಲಿ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
EmoticonEmoticon