BIG NEWS : ರಾಜ್ಯದಲ್ಲಿ ಶೀಘ್ರವೇ `ಅಂಗನವಾಡಿ' ಕೇಂದ್ರಗಳು ಓಪನ್?

February 07, 2021
Sunday, February 7, 2021

 


ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಅಂಗನವಾಡಿ ಕೇಂದ್ರಗಳನ್ನು ಕೂಡಲೇ ಪ್ರಾರಂಭಿಸಿ 3 ರಿಂದ 6 ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ 30 ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ಇತ್ತೀಚೆಗೆ ಅಂಗನವಾಡಿ ಕೇಂದ್ರಗಳನ್ನು 2021 ರ ಜನವರಿ 31 ರೊಳಗೆ ಪ್ರಾರಂಭಿಸುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜನವರಿ 13 ರಂದು ನಿರ್ದೇಶನ ನೀಡಿತ್ತು.

ಹೀಗಾಗಿ ಶೀಘ್ರವೇ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


Thanks for reading BIG NEWS : ರಾಜ್ಯದಲ್ಲಿ ಶೀಘ್ರವೇ `ಅಂಗನವಾಡಿ' ಕೇಂದ್ರಗಳು ಓಪನ್? | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIG NEWS : ರಾಜ್ಯದಲ್ಲಿ ಶೀಘ್ರವೇ `ಅಂಗನವಾಡಿ' ಕೇಂದ್ರಗಳು ಓಪನ್?

Post a Comment