ನವದೆಹಲಿ : ಈಗಾಗಲೇ ಹೈಸ್ಕೂಲ್ ಶಿಕ್ಷಕರ ನೇಮಕಾತಿಯಲ್ಲಿ ಟಿಇಟಿ ಕಡ್ಡಾಯಗೊಳಿಸಲಾಗಿದೆ. ಇದೀಗ ಮುಂದುವರೆದು ಇನ್ಮುಂದೆ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗಿನ ಶಿಕ್ಷಕರ ನೇಮಕಾತಿಗೂ ಟಿಇಟಿ ಪರೀಕ್ಷೆಯನ್ನು ಎನ್ ಸಿ ಟಿ ಇ ಕಡ್ಡಾಯಗೊಳಿಸಿ ಆದೇಶಿಸಿದೆ.
ಎನ್ ಪಿ ಇ-2020ರಂತೆ ಶೈಕ್ಷಣಿಕ ಗುಣಮಟ್ಟಕ್ಕಾಗಿ ಶಿಕ್ಷಕರ ಆಯ್ಕೆ ಕ್ರಮದಲ್ಲೂ ಬದಲಾವಣೆ ಮಾಡಲಾಗಿದೆ. ಇದೀಗ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ಶಿಕ್ಷಕರ ನೇಮಕಾತಿಗೆ ಟಿಇಟಿಯನ್ನು ಕಡ್ಡಾಯಗೊಳಿಸಲಾಗಿದೆ. ಇನ್ಮುಂದೆ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ಶಿಕ್ಷಕರಾಗಬಯಸುವವರು ಕಡ್ಡಾಯವಾಗಿ ಟಿಇಟಿ ಪರೀಕ್ಷೆ ಪಾಸ್ ಮಾಡಿರಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಎನ್ ಪಿ ಇ -2020ರ ಬದಲಾವಣೆಯ ಕ್ರಮದಂತೆ ಇಂತಹ ಹೊಸ ನಿಯಮ ಜಾರಿಗೆ ತರಲಾಗಿದೆ. ಮಾರ್ಚ್ 31, 2021ರೊಳಗಾಗಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗಿನ ಶಾಲಾ ಶಿಕ್ಷಣದ ಎಲ್ಲಾ ಹಂತಗಳಲ್ಲಿ ಶಿಕ್ಷಕರ ನೇಮಕಾತಿಗಾಗಿ ಟಿಇಟಿ ಕಡ್ಡಾಯಗೊಳಿಸಿ ಆದೇಶಿಸಿದ್ದಾರೆ.
EmoticonEmoticon