ಬೆಂಗಳೂರು : ರಾಜ್ಯದಲ್ಲಿ ಕೋವಿಡ್ 19 ಸೋಂಕು ಅಬ್ಬರ ಕಡಿಮೆಯಾಗುತ್ತಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ ಮಾಡಿದೆ.
ಈಗಾಗಲೇ ರಾಜ್ಯದಲ್ಲಿ ಕೋವಿಡ್ ಅಬ್ಬರ ಕಡಿಮೆಯಾಗುತ್ತಿದ್ದು, ಬೇರೆ ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಶಾಲೆಗಳು ಪ್ರಾರಂಭವಾಗಿದೆ. ರಾಜ್ಯಾದ್ಯಂತ ಪ್ರಾಥಮಿಕ ತರಗತಿಗಳಲ್ಲಿ ಸುಮಾರು 45 ಲಕ್ಷ ಮಕ್ಕಳು ಓದುತ್ತಿದ್ದಾರೆ. ಆದರೆ ಶಾಲೆ ಪ್ರಾರಂಭವಾಗದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದೆ.
ಕೋವಿಡ್ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಶಾಲೆ ಪುನಾರಂಭಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ ಸಲ್ಲಿಸಿದೆ.
EmoticonEmoticon