ಸಿಲಿಕಾನ್ ಸಿಟಿಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರುಬಿಟ್ಟ ಅಪಾರ್ಟ್ ಮೆಂಟ್ ನಿವಾಸಿಗರು

February 01, 2021

 


ಬೆಂಗಳೂರು: ಹಲವು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕವನ್ನುಂಟುಮಾಡಿ, ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕಳೆದ ಒಂಭತ್ತು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕೊನೆಗೂ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಬೇಗೂರು ಸಮೀಪದ ಪ್ರೆಸ್ಟೀಜ್ ಸಾಂಗ್ ಆಫ್ ಸೌತ್ ಅಪಾರ್ಟ್ ಮೆಂಟ್ ಹಿಂಭಾಗದ ಕ್ವಾರಿ ಬಳಿ ಚಿರತೆ ಬೋನಿಗೆ ಬಿದ್ದಿದೆ.

ಬೋನಿಗೆ ಬಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ.


Related Articles

Advertisement
Previous
Next Post »