ನಿಲ್ದಾಣದಲ್ಲಿ ಇಳಿಯುವಾಗ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್ ಇಂಡಿಯಾ ವಿಮಾನ

February 20, 2021

 


ಫೋಟೊ: ಎಎನ್ ಐ

ಹೈದರಾಬಾದ್: ಆಂಧ್ರಪ್ರದೇಶದ ವಿಜಯವಾಡದಲ್ಲಿ ಇಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ನಿಲ್ದಾಣದಲ್ಲಿ ಇಳಿಯುತ್ತಿದ್ದಾಗ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.

'ವಿಮಾನದೊಳಗಿದ್ದ ಎಲ್ಲ 64 ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ''ಎಂದು ವಿಜಯವಾಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜಿ.ಮಧುಸೂದನ್ ರಾವ್ ಹೇಳಿದ್ದಾರೆ.

ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಹೇಳಿದೆ.

ಹಲವಾರು ದೀಪಗಳನ್ನು ಹೊಂದಿದ್ದ ವಿದ್ಯುತ್ ಕಂಬವು ಸಂಪೂರ್ಣವಾಗಿ ನೆಲಕ್ಕಪ್ಪಳಿಸಿರುವುದು ದೃಶ್ಯದಲ್ಲಿ ಕಂಡುಬಂದಿದೆ. ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ಬಲಬದಿಯ ರೆಕ್ಕೆ ಸ್ವಲ್ಪ ನಜ್ಜುಗುಜ್ಜಾಗಿರುವುದು ಕಂಡುಬಂದಿದೆ.


Related Articles

Advertisement
Previous
Next Post »