ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

February 11, 2021
Thursday, February 11, 2021

 


ಬೆಂಗಳೂರು, ಫೆ. 10: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ನೆರವು ಮತ್ತು ಸಹಯೋಗದಲ್ಲಿ ರಾಜ್ಯ ಮಟ್ಟದ ಸರ್ ಸಿ.ವಿ. ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ.

ಮಕ್ಕಳಲ್ಲಿ ವಿಜ್ಞಾನದ ಅಭಿರುಚಿ, ಆಸಕ್ತಿ ಹಾಗೂ ಕುತೂಹಲ ಹುಟ್ಟಿಸುವ ಆಶಯದಿಂದ 6 ವರ್ಷಗಳಿಂದ ದೂರದರ್ಶನ ಚಂದನವಾಹಿನಿಯ ಸಹಯೋಗದೊಂದಿಗೆ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಸಂಘಟಿಸಿ, ಅದನ್ನು `ಥಟ್ ಅಂತ ಹೇಳಿ' ಕಾರ್ಯಕ್ರಮದಡಿ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ.

ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಫೆ.27ರಂದು ಆಯಾ ಜಿಲ್ಲೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಬೆಳಗ್ಗೆ 10 ಗಂಟೆಗೆ ಆಯಾ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ.

ಈ ಸ್ಪರ್ಧೆಯಲ್ಲಿ ಪ್ರತಿ ಶಾಲೆಯಿಂದ 9ನೇ ಅಥವಾ 10ನೇ ತರಗತಿಯಲ್ಲಿ ಅಭ್ಯಸಿಸುವ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿ, ದೂರದರ್ಶನ ಕೇಂದ್ರ, ಬೆಂಗಳೂರು ಇಲ್ಲಿ ಅಂತಿಮ ಹಂತದಲ್ಲಿ ರಾಜ್ಯ ಮಟ್ಟದ ಮೌಖಿಕ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗುವುದು. ಜಿಲ್ಲಾ ಮಟ್ಟದ ಬಹುಮಾನದ ಮೊತ್ತ- ಪ್ರಥಮ ಬಹುಮಾನ 3 ಸಾವಿರ ರೂ., ದ್ವಿತೀಯ ಬಹುಮಾನ 2 ಸಾವಿರ ರೂ.ಗಳ ನಗದಿನೊಂದಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಪುರಸ್ಕರಿಸಲಾಗುವುದು. ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕಾಗಿ ಗೌರವ ಕಾರ್ಯದರ್ಶಿಯಾದ ಸಿ. ಕೃಷ್ಣೇಗೌಡ ಅವರು ತಿಳಿಸಿರುತ್ತಾರೆ.

ಶ್ರೀಅನ್ನದಾನೇಶ್ವರ ಹಳ್ಳಿಕೇರಿ, ಸದಸ್ಯರು, ಕಾರ್ಯಕಾರಿ ಸಮಿತಿ, ಕರಾವಿಪ ಮತ್ತು ರಾಜ್ಯ ಸಂಯೋಜಕರು, ವಿಜ್ಞಾನ ರಸಪ್ರಶ್ನೆ ಸ್ಪರ್ಧೆ, ಮೊ.9448763404, ಟಿ.ಜಿ.ಕೃಷ್ಣಮೂರ್ತಿ ರಾಜ್ ಅರಸು, ಮೊ: 9448555068 ರಾಜ್ಯ ಸಹಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಲಿರುವರು. ಹೆಚ್ಚಿನ ಮಾಹಿತಿಗಾಗಿ ಮೊ. 9449530245/9008442557 ಅಥವಾ ಕರಾವಿಪ ಕಚೇರಿ ಬೆಂಗಳೂರು-080-26718939/ಮೊ.9483549159 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ಕೋರಿದೆ.


Thanks for reading ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

Post a Comment